ಧಾರವಾಡ: ಅಳ್ನಾವರ ತಾಲೂಕಿನ ಕಂಬಾರ ಗಣವಿ ಗ್ರಾಮದ ಸೇತುವೆ ಮಳೆಯಿಂದ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪ್ರತಿ ಮಳೆಗಾಲದಲ್ಲೂ ಈ ರೀತಿಯ ಸಮಸ್ಯೆಯಿಂದ ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಈ ಕುರಿತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಈಗಲಾದರೂ ನಮ್ಮ ಗ್ರಾಮಕ್ಕೆ ಸುಸಜ್ಜಿತ ಸೇತುವೆ ನಿರ್ಮಾಣ ಮಾಡಬೇಕು ಎಂದು ಜನರು ಆಗ್ರಹಿಸಿದರು.
ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಕಂಬಾರ ಗಣವಿ ಗ್ರಾಮದ ಜನರ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತೇನೆ. ಸುಸಜ್ಜಿತ ಸೇತುವೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ ಲಾಡ್ ತಿಳಿಸಿದರು.