ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆ: ಸಿದ್ದರಾಮಯ್ಯ

0
3

ಬೆಂಗಳೂರು: ಪ್ರತಿಷ್ಠಿತ ಜಾಕ್ಸನ್ ವೈಲ್ಡ್ ಅವಾರ್ಡ್‌ಗೆ ಭಾಜನವಾಗಿರುವ ಕಪ್ಪೆರಾಗ ಚಿತ್ರತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳು ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಹಂಚಿಕೊಂಡಿರುವ ಅವರು “ಪ್ರತಿಷ್ಠಿತ ಜಾಕ್ಸನ್ ವೈಲ್ಡ್ ಅವಾರ್ಡ್‌ಗೆ ಭಾಜನವಾಗಿರುವ ಕನ್ನಡದ ಮೊದಲ ‘ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ’ ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆಗಳು. ಕರುನಾಡಿನ ಪ್ರತಿಭೆಗಳ ಪರಿಶ್ರಮದ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರುವಾಸಿಯಾಗಿರುವ ಜಾಕ್ಸನ್ ವೈಲ್ಡ್ ಅವಾರ್ಡ್ ‌ನಂತ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತದ್ದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ.

ಚಿತ್ರದ ನಿರ್ದೇಶಕ ಪ್ರಶಾಂತ್ ಎಸ್. ನಾಯ್ಕ ಮತ್ತವರ ತಂಡದ ಸಾಧನೆ ನಾಡಿನ ಯುವ ನಿರ್ದೇಶಕರಿಗೆ ಪ್ರೇರಣೆಯಾಗಲಿ, ಇಂಥ ಇನ್ನಷ್ಟು ಚಿತ್ರಗಳು ನಮ್ಮಲ್ಲಿ ಮೂಡಿಬಂದು, ಕನ್ನಡದ ಕಲರವ ಜಗದಗಲ ಮೊಳಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

Previous articleನಿನ್ನೆ ಆರಂಭಗೊಂಡ ಗಣೇಶ ವಿಸರ್ಜನೆ ಮೆರವಣಿಗೆ ಇನ್ನೂ ಮುಗಿದಿಲ್ಲ
Next articleಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಸ್ತಾಪ