Home ನಮ್ಮ ಜಿಲ್ಲೆ ಕರ್ನಾಟಕಕ್ಕೆ ಸೇರಿಸಿಕೊಳ್ಳಲು ಠರಾವು ಪಾಸ್: ಮಹಾರಾಷ್ಟ್ರ ಸರ್ಕಾರಕ್ಕೆ ಮುಜುಗರ

ಕರ್ನಾಟಕಕ್ಕೆ ಸೇರಿಸಿಕೊಳ್ಳಲು ಠರಾವು ಪಾಸ್: ಮಹಾರಾಷ್ಟ್ರ ಸರ್ಕಾರಕ್ಕೆ ಮುಜುಗರ

0

ವಿಜಯಪುರ: ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದೆ. ಮಹಾರಾಷ್ಟ್ರದ ಗಡಿ ಕನ್ನಡಿಗರು ತಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಿ ಎಂದು ತಮ್ಮ ಪಂಚಾಯಿತಿಯಲ್ಲಿ ಠರಾವು ಪಾಸ್ ಮಾಡಿ ಮಹಾರಾಷ್ಟ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವ ಬೆನ್ನಲ್ಲೇ ಕರ್ನಾಟಕ ಸೇರಬಯಸುವ ಗ್ರಾಮ ಪಂಚಾಯಿತಿಗಳನ್ನು ವಿಸರ್ಜನೆ ಮಾಡುವುದಾಗಿ ಸರ್ಕಾರ ಬೆದರಿಕೆ ಹಾಕಿದೆ.‌
ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟ ತಾಲೂಕಿನಲ್ಲಿರೋ ಕನ್ನಡಿಗರು ಕರ್ನಾಟಕ ಸೇರುವ ನಿರ್ಧಾರ ಮಾಡಿರೋ ಗ್ರಾಮಗಳ ಗ್ರಾಮ ಪಂಚಾಯತಿ ವಿಸರ್ಜನೆ ಮಾಡೋದಾಗಿ ಮಹಾ ಸರ್ಕಾರ ಎಚ್ಚರಿಕೆ ಕೊಟ್ಟಿದೆ.‌ ಅಕ್ಕಲಕೋಟ ತಾಲೂಕಿನ 11 ಗ್ರಾಮ ಪಂಚಾಯತಿಗಳನ್ನು ವಿಸರ್ಜಿಸಲು ಸರ್ಕಾರ ಮುಂದಾಗಿದೆ. 2002ರಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ 22 ಗ್ರಾಮಗಳ ಜನರು ಮಹಾರಾಷ್ಟ್ರಕ್ಕೆ ಸೇರಲು ನಿರ್ಧಾರ ಮಾಡಿದ್ದರು. ಅಗತ್ಯ ಮೂಲಸೌಕರ್ಯ ನೀಡಿ, ಇಲ್ಲವೇ ಮಹಾರಾಷ್ಟ್ರಕ್ಕೆ ಸೇರುತ್ತೇವೆಂದು ತೀರ್ಮಾನ ಮಾಡಿದ್ದರು. ಬಳಿಕ ನಡೆದ ವಿದ್ಯಮಾನದಲ್ಲಿ ಆಗಿನ ಕರ್ನಾಟಕ ಸಿಎಂ ಎಸ್.ಎಂ. ಕೃಷ್ಣ ಅವರು 204 ಕೋಟಿ ರೂಪಾಯಿಯನ್ನು ಆ ಭಾಗಕ್ಕೆ ಅನುದಾನವಾಗಿ ನೀಡಿದ್ದರು. ಆ ಮಾದರಿಯಲ್ಲೇ ಮಹಾರಾಷ್ಟ್ರ ಸರ್ಕಾರ ನಮಗೆ ಅನುದಾನ ನೀಡುವುದರ ಜೊತೆಗೆ ಎಲ್ಲಾ ಮೂಲಸೌಕರ್ಯ ನೀಡಬೇಕು ಎಂದು ಅಕ್ಕಲಕೋಟ ಜನರು ಒತ್ತಾಯಿಸಿದ್ದಾರೆ. ಅನುದಾನ ಹಾಗೂ ಇತರೆ ಸೌಕರ್ಯ ನೀಡಿ ಇಲ್ಲವೇ ಕರ್ನಾಟಕಕ್ಕೆ ಸೇರಲು ಅನುಮತಿ ನೀಡಿ ಎಂದು ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟ ತಾಲೂಕಿನ ವಿವಿಧ ಗ್ರಾಮಗಳ ಜನರು ಮನವಿ ಮಾಡಿದ್ದಾರೆ.

Exit mobile version