Home Advertisement
Home ನಮ್ಮ ಜಿಲ್ಲೆ ಕಲಶ ಹೊತ್ತ ಲಕ್ಷ್ಮೀ

ಕಲಶ ಹೊತ್ತ ಲಕ್ಷ್ಮೀ

0
111

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಳಸಾರೋಹಣ ಹಾಗೂ ಕುಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗ್ರಾಮದಲ್ಲಿ ನಡೆದ ಅದ್ಧೂರಿ ಮೆರವಣಿಗೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಲೆಯ ಮೇಲೆ ಕಲಶ ಹೊತ್ತು ಬಹುದೂರದವರೆಗೂ ಹೆಜ್ಜೆ ಹಾಕಿ ಗಮನ ಸೆಳೆದರು. ಸಾಂಪ್ರದಾಯಿಕ ಗ್ರಾಮೀಣ ಮಹಿಳೆಯಂತೆ ಅವರು ಕಲಶ ಹೊತ್ತು ಸಾಗುವುದನ್ನು ಕಂಡ ಸ್ಥಳೀಯರು ಶಾಸಕಿ ಬಗ್ಗೆ ಅಪಾರ ಅಭಿಮಾನ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ, ನಮ್ಮ ಸಂಸ್ಕೃತಿ, ಸಂಪ್ರದಾಯಗಳು ನಮ್ಮ ಹೆಮ್ಮೆ. ಅವುಗಳನ್ನು ಪ್ರತಿಬಿಂಬಿಸುವ ಇಂಥ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ತಮಗೆ ತೃಪ್ತದಾಯಕ ಎನಿಸುವುದಾಗಿ ಹೇಳಿದರು.