ಕಲುಷಿತ ನೀರು ಸೇವಿಸಿ ವಾಂತಿ-ಭೇದಿ: 15 ಜನ ಅಸ್ವಸ್ಥ

0
13
ನೀರು

ಕುಷ್ಟಗಿ: ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ 15 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ನಡೆದಿದೆ.

ಕಳೆದ ನಾಲ್ಕೈದು ದಿನಗಳಿಂದ ಬೋರ್‌ವೇಲ್ ನೀರು ಸೇವಿಸಿದ ಪರಿಣಾಮ ಗ್ರಾಮದಲ್ಲಿ ಜನರಿಗೆ ವಾಂತಿ-ಭೇದಿ ಶುರುವಾಗಿದ್ದು ರೋಗಿಗಳನ್ನು ಚಿಕಿತ್ಸೆಗಾಗಿ ಜನ ದೋಟಿಹಾಳ, ಮುದೇನೂರು, ಇಳಕಲ್, ಸಿಂಧನೂರಿಗೆ ತೆರಳಿದ್ದಾರೆ ಎನ್ನಲಾಗಿದ್ದು, ಕುಷ್ಟಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಪ್ರಕರಣಗಳು ದಾಖಲಾಗಿವೆ.

ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆಯಲಾಗಿದ್ದು, ವಾಂತಿ-ಭೇದಿಯಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

Previous articleವಿರೋಧಿಗಳ ದಮನಕ್ಕೆ ಅಧಿಕಾರ ಬಳಸಿದರೆ ಬೆಲೆ ತೆರಬೇಕಾಗುತ್ತೆ
Next articleಜ್ವರ, ಕೆಮ್ಮು, ನೆಗಡಿ: ರಕ್ತ ಮಾದರಿ ಪರೀಕ್ಷೆ