ಕಾಂಗ್ರೆಸ್‌ನವರು ದಿಂಬು ಹಾಸಿಗೆಯನ್ನು ಬಿಟ್ಟಿಲ್ಲ: ಸಿಎಂ

0
9
CM in ಹುಬ್ಬಳ್ಳಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ ನ ಕೈ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಂಗ್ರೆಸ್ನವರು ದಿಂಬು ಹಾಸಿಗೆಯನ್ನೂ ಬಿಟ್ಟಿಲ್ಲ, ಬಿಸ್ಕೇಟ್ , ಕಾಫಿಯಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆದರ್ಶನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ನಿಂದ ಮಾರ್ಚ್ 9 ರಂದು ಕರ್ನಾಟಕ ಬಂದ್ ಕರೆ ವಿಚಾರವಾಗಿ ಮಾತನಾಡಿದ ಅವರು, ಜನ ಈ ಬಂದ್ ಕರೆಗೆ ಬೆಂಬಲ ನೀಡುವುದಿಲ್ಲ. ಆಪಾದನೆ ಮಾಡುವವರು ಮೊದಲು ಶುದ್ಧಹಸ್ತರಿರಬೇಕು. ಆವಾಗ ಅದಕ್ಕೆ ಬೆಲೆ ಬರುತ್ತದೆ.
ಕಾಂಗ್ರೆಸ್ ಮಾಡಿದ ಕರ್ಮಕಾಂಡ ಒಂದಾ ಎರಡಾ, ಕಾಂಗ್ರೆಸ್ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡಿದೆ. ಎಂ.ಬಿ.ಪಾಟೀಲ್, ಜಾರ್ಜ್, ಮಹದೇವಪ್ಪಗೆ ಕೇಳಬೇಕು ಸಿದ್ಧರಾಮಯ್ಯ ಎಷ್ಟೆಲ್ಲ ಟಾರ್ಗೇಟ್ ಕೊಟ್ಟಿದ್ರು ಎಂಬುದನ್ನು ಎಂದರು.
ಭ್ರಷ್ಟಾಚಾರದ ಕೂಪದಲ್ಲಿ ಇರುವವರು ಆಪಾದನೆ ಮಾಡಿದ್ರೆ ನಡೆಯಲ್ಲ.ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಬಂದ್ ಆಗುತ್ತಿದೆ ಹೀಗಾಗಿ ರಾಜ್ಯ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ. ಬಂದ್ ಮೂಲಕ ತಮ್ಮ ರಾಜಕೀಯ ಭವಿಷ್ಯ ಬರೆದುಕೊಳ್ಳಬಹುದು ಅನ್ನೋದು ಮೂರ್ಖತನ. ಚುನಾವಣಾ ಅಖಾಡವಿದೆ ಜನರೇ ತೀರ್ಮಾನ ಮಾಡುತ್ತಾರೆ ಎಂದರು.
ಬೆಳಗಾವಿ ರಾಜಹಂಸಗಡದಲ್ಲಿ ಕಾಂಗ್ರೆಸ್ ನಿಂದ ಶಿವಾಜಿ ಪ್ರತಿಮೆ ಮರು ಉದ್ಘಾಟನೆ ಪ್ರಕರಣ ಇದೊಂದು ಹಾಸ್ಯಾಸ್ಪದ ಸಂಗತಿ. ಸರ್ಕಾರವೇ ಬಂದು ಮೂರ್ತಿ ಉದ್ಘಾಟನೆ ಮಾಡಿದ ಮೇಲೆ ಈ ರೀತಿ ಮಾಡೋದು ಸರಿಯಲ್ಲ. ಸರ್ಕಾರದಿಂದ ಉದ್ಘಾಟನೆ ಮಾಡಿದ ನಂತರ ಒಣ ಪ್ರತಿಷ್ಠೆಗಾಗಿ ಈ ರೀತಿ ಮಾಡಲಾಗಿದೆ. ರಾಷ್ಟ್ರ ನಾಯಕರ ಹೆಸರಲ್ಲಿ ಈ ರೀತಿ ರಾಜಕೀಯ ಮಾಡೋದು ಸರಿಯಲ್ಲ ಎಂದರು.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಐಎಸ್ ಕೆಪಿ ಹೊಣೆಹೊತ್ತ ವಿಚಾರ, ಈಗ ಡಿಕೆಶಿ ಏನು ಹೇಳ್ತಾರೆ ಕೇಳಬೇಕು. ಬರೀ ಸಾಧಾ ಕುಕ್ಕರ್ ಅಂತಾ ಡಿಕೆಶಿ ಹೇಳಿದ್ರು, ಬಿಜೆಪಿಯವರು ಇದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತಾ ಹೇಳಿದ್ರು, ಈಗ ಈ ವಿಚಾರಕ್ಕೆ ಡಿಕೆಶಿ ಏನು ಹೇಳ್ತಾರೆ ಎಂದರು.

Previous articleಲಂಡನ್‌ನಲ್ಲಿ ಬಸವಣ್ಣನ ಪ್ರತಿಮೆಗೆ ರಾಹುಲ್‌ ಮಾಲಾರ್ಪಣೆ
Next articleಪಂಚಮಸಾಲಿ ಮೀಸಲಾತಿ: ಸಮಾಜಕ್ಕೆ ಒಳ್ಳೆಯ ದಿನ ಬರಲಿವೆ: ವಚನಾನಂದ ಸ್ವಾಮೀಜಿ