ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುಲಾಂ ನಬಿ ಆಜಾದ್ ರಾಜೀನಾಮೆ

0
34

ಕಾಂಗ್ರೆಸ್​ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ತೀವ್ರ ವಿಷಾದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು. ಇತ್ತೀಚೆಗೆ ಪಕ್ಷದ ಜಮ್ಮು ಕಾಶ್ಮೀರ ರಾಜಕೀಯ ವ್ಯವಹಾರ ಸಮಿತಿಗೂ ಆಜಾದ್ ರಾಜೀನಾಮೆ ನೀಡಿದ್ದರು. ಈಗ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

Previous articleಸಿದ್ದರಾಮಯ್ಯ ರಾಜಕೀಯ ಅಲೆಮಾರಿ: ವಿ.ಶ್ರೀನಿವಾಸ್​ ಪ್ರಸಾದ್
Next articleವಿನಾಯಕನಿಗೂ ಸಾವರ್ಕರ್‌ಗೂ ಏನು ಸಂಬಂಧ: ಡಿಕೆಶಿ ಪ್ರಶ್ನೆ