ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಪ್ರಭಾಕರ್ ಚಿಣಿ

0
18
ಚಿಣಿ

ಕುಷ್ಟಗಿ: ವಿಧಾನಸಭೆ ಕ್ಷೇತ್ರದ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವುದು ಖಚಿತವಾಗುತ್ತಿದ್ದಂತೆ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅರ್ಜಿ ಸಲ್ಲಿಸಿದ್ದ ನಿವೃತ್ತ ಪ್ರಧಾನ ಇಂಜಿನಿಯರ್ ಪ್ರಭಾಕರ್ ಚಿಣಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಅರ್ಜಿಯನ್ನು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರವಾನಿಸಿದ್ದಾರೆ.
ತಾಲೂಕಿನ ಉಪ್ಪಾರ್ ಸಮಾಜದ ಪ್ರಮುಖ ಮುಖಂಡ ಪ್ರಭಾಕರ ಚಿಣಿ ಕಳೆದ ನವೆಂಬರ್ 10ರಂದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸ್ಥಾನಕ್ಕೆ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದರು. ಕ್ಷೇತ್ರದಲ್ಲಿ ತಮ್ಮದೇ ಆದ ಚುನಾವಣೆ ಕಾರ್ಯತಂತ್ರ ರೂಪಿಸಿಕೊಂಡು ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಕಾರ್ಯಪ್ರವೃತ್ತರಾಗಿ ಕೆಲಸ ಮಾಡುತ್ತಿದ್ದರು.

Previous articleಪೊಲೀಸರ ಹೆಸರು ಹೇಳಿ ಅಪಹರಣ: ಸಂಘಟನೆ ಮುಖಂಡನ ಬಂಧನ
Next articleನರಭಕ್ಷಕ ಹುಲಿ ಸೆರೆ