ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ.
ಯುಗಾದಿ ಹಬ್ಬದಂದು ಬಿಡುಗಡೆಯಾಗಬೇಕಿದ್ದ ಮೊದಲ ಪಟ್ಟಿ ಕೊನೆಗೂ ಇಂದು ಬಿಡುಗಡೆಯಾಗಿದೆ.
ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯನವರಿಗೆ ಟಿಕೆಟ್ ನೀಡಲಾಗಿದ್ದು, ಕೋಲಾರ ಮತ್ತು ಬಾದಾಮಿ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಘೋಷಣೆ ಮಾಡಿಲ್ಲ.