ಕಾಂಗ್ರೆಸ್ ಸರ್ಕಾರ ಗೊಂದಲದ ಗೂಡಾಗಿದೆ

0
8

ಹಾವೇರಿ: ಈ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಸಚಿವರ ನಡುವೆ ಹೊಂದಾಣಿಕೆಯಿಲ್ಲ. ಸರ್ಕಾರ ಗೊಂದಲದ ಗೂಡಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.
ಶಿಗ್ಗಾವಿ ಕ್ಷೇತ್ರದ ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿದಿನ ಈ ಸರ್ಕಾರದ ಮಂತ್ರಿಗಳು ಒಂದಿಲ್ಲೊಂದು ಗೊಂದಲದ ಹೇಳಿಕೆ ಕೊಡುವುದನ್ನು ನೋಡಿದರೆ, ಈ ಸರ್ಕಾರದ ಒಳಗಡೆ ಯಾವದೂ ಸರಿ ಇಲ್ಲ ಸರ್ಕಾರ ಗೊಂದಲದ ಗೂಡಾಗಿದೆ, ಸಚಿವರ ನಡುವೆ ಒಬ್ಬರಿಗೊಬ್ಬರ ಸಹಕಾರ ಇಲ್ಲ. ಕ್ಯಾಬಿನೆಟ್ ನಲ್ಲಿ ಒಕ್ಕಟ್ಟಿಲ್ಲ ಈ ಬಗ್ಗೆ ಕಾಂಗ್ರೆಸ್ ಶಾಸಕರಲ್ಲಿ ಆಕ್ರೋಶ ಇದೆ. ಕರ್ನಾಟಕದ ಜನರಿಗೆ ಈ ಸರ್ಕಾರದ ಇದೆ ಎಂಬ ಭಾವನೆ ಇಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಬರ ಬಂದರೆ ನೆರವಿಲ್ಲ, ಕಾವೇರಿ ವಿಚಾರದಲ್ಲಿ ನೆರವಾಗುತ್ತಿಲ್ಲ. ನಾಲ್ಕು ತಿಂಗಳಲ್ಲಿ ಈ ಸರ್ಕಾರ ಜನರ ಪ್ರೀತಿಯನ್ನು ಕಳೆದಕೊಂಡಿದೆ. ಸಚಿವರ ಮೇಲೆ ಮುಖ್ಯಮಂತ್ರಿಗಳ‌ ನಿಯಂತ್ರಣ ಇಲ್ಲ ಎಂದರು.

ಕಾವೇರಿ ವಿಚಾರದಲ್ಲಿ ಗೊಂದಲ: ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿಗಳು ನ್ಯಾಯಮೂರ್ತಿಗಳ ಸಭೆಯಲ್ಲಿ ಒಂದು ಹೇಳುತ್ತಾರೆ ಹೊರಗೊಂದು ಹೇಳುತ್ತಾರೆ‌. ನಿನ್ನೆ ನ್ಯಾಯಮೂರ್ತಿಗಳ ಮಿಟಿಂಗನಲ್ಲಿ ನಾವು ಅಪೀಲ್ ಹೊಗುತ್ತೇವೆ. ನೀರು ನಿಲ್ಲಿಸುತ್ತೇವೆ ಅಂತಾ ಸಭೆಯಲ್ಲಿ ಹೇಳಿದ್ದರು. ಆದರೆ, ಹೊರಗಡೆ ಬಂದು ಅಪೀಲ್ ಹೊಗುತ್ತೇವೆ ಆದರೆ, ನೀರು ನಿಲ್ಲಿಸಲು ಆಗುವುದಿಲ್ಲ ಅಂತ ಹೇಳಿದ್ದಾರೆ.‌ ಯಾಕೇ ನಿಲ್ಲಿಸಲು ಆಗಲ್ಲ ಎಂದು ಪ್ರಶ್ನಿಸಿದರು‌.
ನೀರು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆಗುತ್ತದೆ‌. ಸರ್ಕಾರ ವಜಾ ಆಗುತ್ತೆ, ಡ್ಯಾಂ ವಶಪಡಿಸಿಕೊಳ್ಳುತ್ತಾರೆ ಅಂತ ಮುಖ್ಯಮಂತ್ರಿ ಗಳು ಹೇಳುತ್ತಾರೆ. ನೀವು ಇನ್ನೂ ಸುಪ್ರಿಂ ಕೊರ್ಟ್ ಗೆ ಹೊಗುವುದಿದೆ. ಅಲ್ಲಿಗೆ ಹೋಗುವ ಮುನ್ನ ಹೇದರಿಕೊಂಡು ಈ ತರಹ ಹೇಳಿಕೆ ಕೊಟ್ಟರೆ, ನೀರು ಬಿಡುವಂತೆ ಕೊರ್ಟ್ ಹೇಳುತ್ತದೆ. ಮುಖ್ಯಮಂತ್ರಿಗಳಿಗೆ ಅಷ್ಟಾದರೂ ವ್ಯವಧಾನ ಬೇಡವೇ ? ಈ ಸರ್ಕಾರ ಈ ತರಹ ದ್ವಂದ್ವ ನೀತಿ ನಡೆದುಕೊಂಡು ಬಂದಿದೆ. ರಾಜ್ಯದ ನೆಲ ಜಲ ಉಳಿಸಲು ಈ ಸರ್ಕಾರದಿಂದ ಸಾಧ್ಯ ಇಲ್ಲ ಅನ್ನುವುದು ಜನರಿಗೆ ಗೊತ್ತಾಗಿದೆ ಎಂದರು..

ಶಾಮನೂರು ಹೇಳಿಕೆ ಗಂಭೀರ: ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು. ಅಖಿಲ ಭಾರತ ವಿರಶೈವ ಮಹಾಸಭಾದ ಅಧ್ಯಕ್ಷರು
ಅವರ ಹೇಳಿಕೆಯನ್ನು ಜನ ಗಂಭೀರವಾಗಿ ಪರಿಗಣನೆ ಮಾಡುತ್ತಾರೆ. ಮುಖ್ಯಮಂತ್ರಿಗಳು ಅವರಿಗೆ ಸ್ಪಷ್ಟವಾದ ಉತ್ತರ ಕೊಡಬೇಕು. ಮುಖ್ಯಮಂತ್ರಿಗಳ ಹೇಳಿಕೆ ಬಳಿಕವೂ ನಮ್ಮ ಹೇಳಿಕೆ ಬದ್ದ ಅನ್ನುವುದನ್ನು ನೋಡಿದರೆ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಹಳ ಗಂಭಿರವಾಗಿದೆ ಎಂದು ಹೇಳಿದರು.

Previous articleವಿದ್ಯುತ್ ಸ್ಪರ್ಶ : ದಂಪತಿ ದುರ್ಮರಣ
Next articleಶಾಮನೂರ ಜತೆ ಚರ್ಚಿಸಿ ಪ್ರತಿಕ್ರಿಯಿಸುವೆ: ಸವದಿ