ಕಾಂಗ್ರೆಸ್‌ ಸೇರ್ಪಡೆಯಾದ ಇಬ್ಬರು ಮಾಜಿ ಶಾಸಕರು

0
13

ಬೆಂಗಳೂರು: ಕೊಳ್ಳೆಗಾಲ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಂಜುಂಡಸ್ವಾಮಿ ಮತ್ತು ವಿಜಯಪುರದ ಮಾಜಿ ಶಾಸಕ ಮನೋಹರ ಐನಾಪುರ ಅವರು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾದರು. ಇಬ್ಬರು ಮಾಜಿ ಶಾಸಕರು ಮತ್ತು ಮೈಸೂರು ಮಾಜಿ ಮೇಯರ್ ಪುರುಷೋತ್ತಮ ಸೇರಿಸಿಕೊಂಡಿದ್ದಾರೆ. ‘ಇವತ್ತು ಮಾಜಿ ಶಾಸಕರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಾಲಿ ಶಾಸಕು ಪಕ್ಷ ಸೇರಲಿದ್ದು, ಅವರ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ’ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬಿಜೆಪಿಯ ಮಾಜಿ ಶಾಸಕರಾದ ಕೊಳ್ಳೇಗಾಲದ ನಂಜುಂಡಸ್ವಾಮಿ, ಬಿಜಾಪುರದ ಮನೋಹರ್ ಐನಾಪುರ ಹಾಗೂ ಮೈಸೂರಿನ ಮಾಜಿ ಮೇಯರ್ ಪುರುಷೋತ್ತಮ್ ಅವರು ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Previous articleಮಾಡಾಳ್ ಲಂಚ ಪ್ರಕರಣ: ಇಬ್ಬರು ತನಿಖಾಧಿಕಾರಿಗಳ ಬದಲಾವಣೆ
Next articleಮಾಡಾಳ್ ಮಿಸ್ಸಿಂಗ್ ಪೋಸ್ಟರ್