Home Advertisement
Home ನಮ್ಮ ಜಿಲ್ಲೆ ಧಾರವಾಡ ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ: ಕೇಂದ್ರ ಸಚಿವ ಜೋಶಿ

ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ: ಕೇಂದ್ರ ಸಚಿವ ಜೋಶಿ

0
147

ಹುಬ್ಬಳ್ಳಿ: ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕುಟುಕಿದರು.
ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ’ ಎಂದು ಪ್ರಶ್ನಿಸಿದರು.