ಕುಷ್ಟಗಿ: ವಿಧಾನಸಭಾ ಕ್ಷೇತ್ರದ ಮುಂದಿನ 2023 ರ ವಿಧಾನಸಭೆ ಚುನಾವಣೆಗೆ ಸ್ಪರ್ಧೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಿದ್ದು. ಕಾಂಗ್ರೆಸ್ ಪಕ್ಷದಿಂದ ಮಾಜಿ ಶಾಸಕ ಹಾಗೂ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಉಪಾಧ್ಯಕ್ಷ ಹಸನಸಾಬ ದೋಟಿಹಾಳ ಯಲಬುರ್ಗಿ ಸ್ಪರ್ಧೆಗೆ ಇಚ್ಚೆ ಬಯಸಿ ಕಾಂಗ್ರೆಸ್ ಪಕ್ಷಕ್ಕೆ 2 ಲಕ್ಷ ಹಣ ತುಂಬಿ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದರು. ಇವರ ಜೊತೆಗೆ ಹಾಲಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಅರ್ಜಿ ಸಲ್ಲಿಸಿ ನನಗೆ ಕುಷ್ಟಗಿ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಶಾಸಕ ಬಯ್ಯಾಪುರ
ಹೆಸರು ಅಂತಿಮವಾಗಿ ಪಕ್ಷದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಾಜಿ ಶಾಸಕ ಹಾಗೂ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಉಪಾಧ್ಯಕ್ಷ ಹಸನಸಾಬ ದೋಟಿಹಾಳ ಯಲಬುರ್ಗಿ ಕೈ ಟಿಕೆಟ್ ತಪ್ಪಿದೆ.