ಬೆಂಗಳೂರು: ಇಂದು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮುಳಬಾಗಿಲು ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕರಾದ ನಾಗೇಶ್ ಹಾಗೂ ಜೆಡಿಎಸ್ನ ಮಾಜಿ ಶಾಸಕರಾದ ವೈ.ಎಸ್.ವಿ. ದತ್ತ ಹಾಗೂ ಮೈಸೂರಿನ ಬಿಜೆಪಿ ಮುಖಂಡ, ಮೂಡ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಅವರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.