ಕೊಳ್ಳೇಗಾಲ ಶಾಸಕ ಎನ್.ಮಹೇಶ್​ ಆಸ್ಪತ್ರೆಗೆ ದಾಖಲು

ಕೊಳ್ಳೆಗಾಲ ಶಾಸಕ ಎನ್. ಮಹೇಶಗೆ ಎದೆನೋವು ಕಾಣಿಸಿಕೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ರವಿವಾರ ಆಸ್ಪತ್ರೆಗೆ ದಾಖಲು ದಾಖಲಾಗಿದ್ದಾರೆ.
ಮಹೇಶ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.