Home ನಮ್ಮ ಜಿಲ್ಲೆ ಕೋಲಾರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ: ಎಚ್‌ಡಿಕೆ

ಕೋಲಾರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ: ಎಚ್‌ಡಿಕೆ

0

ವಿಧಾನಸಭೆ ಚುನಾವಣೆಗೆ ಕೋಲಾರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೋಲಾರದಲ್ಲೇ ನಿಲ್ಲಲಿ, ಬೇರೆ ಕಡೆ ನಿಲ್ಲಲಿ. ನಾವೇನು ಬಿಜೆಪಿ ಜೊತೆ ಸೇರಿ ಕುತಂತ್ರ ಮಾಡಬೇಕಿಲ್ಲ. ನಮಗೆ ಕೋಲಾರದಲ್ಲಿ ಸಮಸ್ಯೆಯೇ ಇಲ್ಲ.‌ ಪಕ್ಷದ ಅಭ್ಯರ್ಥಿ ಯಾರು ಅನ್ನೋದು ಈಗಾಗಲೇ ನಿರ್ಣಯ ಆಗಿದೆ. ಬೇರೆ ಪಕ್ಷದ ಜೊತೆ ಸೇರಿ ತಂತ್ರ ಮಾಡುವಂತದ್ದೇನು ಇಲ್ಲ. ಸಿದ್ದರಾಮಯ್ಯರನ್ನು ಅವರ ಪಕ್ಷದವರೇ ಸೋಲಿಸುತ್ತಾರೆ ಎಂದರು.

Exit mobile version