ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ

0
12
ಪಂಚರತ್ನ

ಕೋಲಾರ: ಮಳೆಯ ಕಾರಣದಿಂದಾಗಿ ಮುಂದೂಡಲಾಗಿದ್ದ ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಲಿದೆ. ನವೆಂಬರ್.1 ರಂದು ಮಾಜಿ ಪ್ರದಾನಿ ದೇವೇಗೌಡರು ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆಯಲ್ಲಿ ಚಾಲನೆ ನೀಡಿದ್ದರು. ಐದು ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕೆ ಗ್ರಾಮ ವಾಸ್ತವ್ಯ ಮಾಡಬೇಕಿತ್ತು. ಆದರೆ ಭಾರೀ ಮಳೆಯ ಕಾರಣದಿಂದಾಗಿ ಮುಂದೂಡಲಾಗಿತ್ತು.
ಇದೀಗ ಮುಳಬಾಗಿಲಿನಲ್ಲಿ ಮತ್ತೆ ಮರುಚಾಲನೆ ನೀಡಲಿದ್ದು, ಬೃಹತ್ ಸಭೆಗೆ ಸಿದ್ದತೆ ಮಾಡಲಾಗಿದೆ. ಜೆಡಿಎಸ್ ನ‌ ವರಿಷ್ಟ ಹೆಚ್ ಡಿ ದೇವೆಗೌಡರು,ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕೆ, ರಾಜ್ಯಾದ್ಯಕ್ಷ ಸಿಎಂ ಇಬ್ರಾಹಿಂ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಸೇರಲಿದ್ದಾರೆ.ಸಮಾವೇಶ ನಡೆಸಲು ಬೃಹತ್ ವೇದಿಕೆ ಹಾಕಲಾಗಿದೆ. ಇನ್ನು ಪಂಚರತ್ನ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ತಂಡೋಪತಂಡಗಳಾಗಿ ಆಗಮಿಸುತ್ತಿದ್ದಾರೆ. ಇನ್ನು 12 ಗಂಟೆಗೆ ಆರಂಭವಾಗಬೇಕಿದ್ದ ಕಾರ್ಯಕ್ರಮ 3 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಇನ್ನು ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ‌.

Previous articleಗಾಂಜಾ ಸಾಗಾಟ ಪತ್ತೆ: ಇಬ್ಬರು ಆರೋಪಿಗಳ ಸೆರೆ
Next articleಭಾರತದ ಮೊದಲ ಖಾಸಗಿ ರಾಕೆಟ್ ವಿಕ್ರಮ್-ಎಸ್ ಯಶಸ್ವಿ ಉಡಾವಣೆ