ಕೋಲಾರ ಕ್ಷೇತ್ರ ಹೈಕಮಾಂಡ್‌ ನಿರ್ಧಾರವೇ ಅಂತಿಮ

0
9
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ವರುಣಾ ಕ್ಷೇತ್ರಕ್ಕೆ ಟಿಕೆಟ್‌ ನೀಡಿದೆ. ಕೋಲಾರದ ಕಾಂಗ್ರೆಸ್ ಅಭ್ಯರ್ಥಿ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿಲ್ಲ. ಈ ಮೂಲಕ ಸಿದ್ದರಾಮಯ್ಯ ವರುಣಾ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸುತ್ತಾರಾ ಅನ್ನೋ ಕುತೂಹಲ ಮುಂದುವರಿದಿದೆ.
ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಾನು ವರುಣಾ ಮತ್ತು ಕೋಲಾರ ಎರಡು ಕಡೆ ಟಿಕೆಟ್‌ ಕೊಡುವಂತೆ ಹೈಕಮಾಂಡ್‌ಗೆ ಕೇಳಿದ್ದೇನೆ. ವರುಣಾದಲ್ಲಿ ನಿಲ್ಲುವಂತೆ ಹೈಕಮಾಂಡ್‌ನವರು ಹೇಳಿದ್ದಾರೆ. ಕೋಲಾರ ಕೂಡ ಕೇಳಿದ್ದೇನೆ. ಆದರೆ, ಹೈಕಮಾಂಡ್ ನಿರ್ಧಾರವೇ ಅಂತಿಮ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Previous articleಪಂಚಮಸಾಲಿ ಮೀಸಲಾತಿ: ವಿಜಯಾನಂದ ಕಾಶಪ್ಪನವರ್ ರಾಜೀನಾಮೆ
Next articleಬೆಣ್ಣೆನಗರಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ