Home ನಮ್ಮ ಜಿಲ್ಲೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದೊಡ್ಡ ಪರಿವರ್ತನೆ: ಸಿಎಂ

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದೊಡ್ಡ ಪರಿವರ್ತನೆ: ಸಿಎಂ

0

ಬೆಂಗಳೂರು: ಭಾರತೀಯ ಜನತಾ ಪಕ್ಷದ ಜಿಲ್ಲಾ, ಮಂಡಲ, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಈ ಬಾರಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ದೊಡ್ಡ ಬದಲಾವಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಪಕ್ಷಗಳ ಮುಖಂಡರು ಹಮ್ಮಿಕೊಂಡಿದ್ದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಬಿಜೆಪಿ ಇಡೀ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ. ಏಳು ಕೋಟಿಗಿಂತ ಹೆಚ್ಚು ಕಾರ್ಯಕರ್ತರಿರುವ ಪಕ್ಷ. ಭಾರತ ದೇಶದಲ್ಲಿ ಎಲ್ಲಾ ರಾಜ್ಯಗಳಲ್ಲಿ ಸದೃಢ ಹಾಗೂ ಭವಿಷ್ಯವಿರುವ ಪಕ್ಷವಾಗಿದೆ. ಉತ್ತಮ ಭವಿಷ್ಯವಿರುವ ರಾಜಕೀಯ ಪಕ್ಷದ ಹಡಗಿನಲ್ಲಿ ನಾವೆಲ್ಲರೂ ಕುಳಿತಿದ್ದೇವೆ. ನಿಮ್ಮ ಪ್ರಯಾಣ ಅತ್ಯಂತ ಯಶಸ್ವಿಯಾಗುತ್ತದೆ. ಕ್ಷೇತ್ರದ ಅಭಿವೃದ್ಧಿಯಾಗುವುದಲ್ಲದೇ ಬರುವ ದಿನಗಳಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳು ಸಂಪೂರ್ಣ ಅಭಿವೃದ್ಧಿಯಾಗಲಿದೆ ಎಂದರು.

Exit mobile version