ಕೋಲಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶಕ್ಕೆ ಜನರ ಕೊರತೆ ಎದ್ದು ಕಾಣುತ್ತಿದೆ. ಕಾರ್ಯಕ್ರಮಕ್ಕೆ ಸುಮಾರು 60 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇತ್ತು. ಹೀಗಾಗಿ 40 ಸಾವಿರಕ್ಕೂ ಹೆಚ್ಚು ಕುರ್ಚಿಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಸಮಾವೇಶಕ್ಕೆ ಜನರು ಬಾರದೇ ಖಾಲಿ ಖಾಲಿ ಕುರ್ಚಿಗಳು ಎದ್ದು ಕಾಣುತ್ತಿವೆ.