ಗಡಿ ವಿವಾದ: ರಾಗ ಬದಲಿಸಿದ ಮಹಾ ಸಿಎಂ

0
12
eknath shinde

ಬೆಳಗಾವಿ: ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಗುರುವಾರ ಹೊಸ ಹೇಳಿಕೆ ನೀಡುವ ಮೂಲಕ ರಾಗ ಬದಲಿಸಿದ್ದಾರೆ.
ಸುಪ್ರೀಂಕೋರ್ಟ್‌ನಲ್ಲಿ ತಾನೇ ದಾವೆ ಹೂಡಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಮತ್ತೆ ಹೊಸ ವರಸೆ ಶುರು ಮಾಡಿದ್ದು ಮಾತುಕತೆ ಮೂಲಕ ಬಗೆಹರಿಯಬೇಕು ಎಂದು ವಾದ ಮಂಡಿಸುವುದಾಗಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಶಿಂಧೆ ಅವರು, ಗಡಿ ವಿವಾದ ಕುರಿತು ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಈ ಹಳೆಯ ವಾದವೇನಿದೆ ಅದು ನ್ಯಾಯಾಲಯದ ಮುಂದಿದೆ. ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಆದರೆ ಇದರ ಜೊತೆಗೆ ಈ ವಿಷಯ ಮಾತುಕತೆ ಮೂಲಕ ಬಗೆಹರಿಯಬೇಕು ಎಂಬುದು ಮಹಾರಾಷ್ಟ್ರ ಸರ್ಕಾರದ ನಿಲುವಾಗಿದೆ ಎಂದಿದ್ದಾರೆ.

Previous articleಗೂಡಂಗಡಿ ತೆರವು: ಕೈಯಲ್ಲಿ ವಿಷ ಹಿಡಿದು ಪ್ರತಿಭಟಿಸಿದ ಮಹಿಳೆ
Next articleಬಿಜೆಪಿ ಸರ್ಕಾರಕ್ಕೆ ಕಣ್ಣು-ಕಿವಿಯೇ ಇಲ್ಲ: ಡಿಕೆಶಿ ಲೇವಡಿ