Home News ಗಣೇಶ ಮೂರ್ತಿ ಹಿಡಿದು ಬಿಜೆಪಿ ವಿರುದ್ಧ ಪ್ರಚಾರ: ಮುತಾಲಿಕ್

ಗಣೇಶ ಮೂರ್ತಿ ಹಿಡಿದು ಬಿಜೆಪಿ ವಿರುದ್ಧ ಪ್ರಚಾರ: ಮುತಾಲಿಕ್

ಹುಬ್ಬಳ್ಳಿ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ಇರುವ ಮಹಾನಗರ ಪಾಲಿಕೆ ಜಾಗೆಯಲ್ಲಿ(ಈದ್ಗಾ ಇರುವ ಸ್ಥಳ) ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಿ ವರದಿ ಕೊಟ್ಟಿದ್ದೇ ಆದಲ್ಲಿ ಅಂತಹ ಸದಸ್ಯರ ವಿರುದ್ಧ ಅವರ ವಾರ್ಡ್‌ನಲ್ಲಿಯೇ ಮುಂದಿನ ಚುನಾವಣೆ ಸಂದರ್ಭದಲ್ಲಿ ಗಣೇಶ ಮೂರ್ತಿ ಹಿಡಿದುಕೊಂಡು ಬಿಜೆಪಿ ಸದಸ್ಯರ ವಿರುದ್ಧ ಪ್ರಚಾರ ಮಾಡುತ್ತೇವೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡದೇ ಹಿಂದು ವಿರೋಧಿ ಧೋರಣೆ ಅನುಸರಿಸಿದ್ದಾರೆ. ಅವರಿಗೆ ಮತ ಹಾಕಬೇಡಿ ಎಂದು ಪ್ರಚಾರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Exit mobile version