ಗಣೇಶ ವಿಸರ್ಜನೆಗೆ ಪೊಲೀಸ್ ಅನುಮತಿ ಇಲ್ಲ

0
8

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಹಿಂದು ಮಹಾಗಣಪತಿ ಉತ್ಸವ ಮಂಡಳಿ ನವನಗರ ವತಿಯಿಂದ ೨೧ ದಿನಗಳ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ವಿಸರ್ಜನೆ ವೇಳೆ ಪೊಲೀಸ್ ಬಂದೂಬಸ್ತ್ ನೀಡುವಂತೆ ಪೊಲೀಸ್ ಇಲಾಖೆಗೆ ಕೋರಲಾಗಿದೆ ಎಂದು ಬಿಜೆಪಿ ಮುಖಂಡ ಶಿವಾನಂದ ಮುತ್ತಣ್ಣವರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಪ್ರದಾಯದ ಪ್ರಕಾರ ನಾವು ೨೧ ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದೇವೆ. ೨೧ ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೇಳಿದಾಗ ಪೊಲೀಸ್ ಇಲಾಖೆ ೧೧ ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತೆ ತಿಳಿಸಿದ್ದರು. ವಿಸರ್ಜನೆಗೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ ಎಂದರು.

Previous articleನಕಲಿ ಆಧಾರ್, ಪಡಿತರ ಚೀಟಿ, ಅಂಕಪಟ್ಟಿ ಸೃಷ್ಟಿ: ಖದೀಮ ಸೆರೆ
Next article8ರಂದು ಹಿಂದು ಮಹಾಗಣಪತಿ ವಿಸರ್ಜನೆ