ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳಾ ಫಲಾನುಭವಿಗಳಿಗೆ ತಿಂಗಳಿಗೆ 2 ಸಾವಿರ ರೂ. ಜಮೆ ಮಾಡುವ ರಾಜ್ಯ ಮಟ್ಟದ ಚಾಲನೆ ಕಾರ್ಯಕ್ರಮ ಇಂದು ಮೈಸೂರಿನಲ್ಲಿ ನಡೆಯಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮನವಿ ಮಾಡಿದ್ದಾರೆ.