ಗೃಹಲಕ್ಷ್ಮಿ ಅರ್ಜಿಗೆ 100 ರೂ. ವಸೂಲಿ: ಗ್ರಾಮ ಒನ್ ಕೇಂದ್ರದ ಲಾಗ್‌ಇನ್ ಐಡಿ ರದ್ದು

0
5

ಚಿಕ್ಕೋಡಿ: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು 100 ರೂ. ಹಣ ವಸೂಲಿ ಮಾಡುತ್ತಿದ್ದ ಗ್ರಾಮ ಒನ್‌ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದ ಗ್ರಾಮ ಒನ್‌ ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಅರ್ಜಿ ನೊಂದಣಿಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಕೇಂದ್ರದ ಲಾಗ್‌ಇನ್ ಐಡಿ ರದ್ದು ಮಾಡಿ ಜೊತೆಗೆ ಕೇಂದ್ರವನ್ನು ಸೀಜ್ ಮಾಡಲಾಗಿದೆ. ಕಂಪ್ಯೂಟರ್ ಆಪರೇಟರ್ ಅಜೀತ್ ಇದ್ಲಿ ವಿರುದ್ಧ ಐಪಿಸಿ ಸೆಕ್ಷನ್ 1860(U/s 406, 420)ಅಡಿ ಕ್ರಿಮಿನಲ್ ಕೇಸ್ ಕೂಡ ದಾಖಲಾಗಿದೆ.

Previous articleಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ
Next articleಭೀಕರ ಬಾಂಬ್ ಸ್ಫೋಟ: 35 ಜನ ಸಾವು