ಗೋಕಾಕ: ಗೋಕಾಕ ಪಾಲ್ಸ್‌ಗೆ ಇಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಗೋಕಾಕ ಪಾಲ್ಸ್‌ಗೆ ವರ್ಷಕ್ಕೆ 3 ರಿಂದ 4 ಲಕ್ಷ ಜನ ಭೇಟಿ ನೀಡಿದ್ದಾರೆ. ಭದ್ರತೆಗಾಗಿ ಹಲವು ಕ್ರಮ ಕೈಗೊಳ್ಳಲು ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ ಪಾಲ್ಸ್‌ಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರಸಿದ್ದ ಗೋಕಾಕ ಜಲಪಾತಕ್ಕೆ ಅಪಾರ ಸಂಖ್ಯೆಯ ಪ್ರಯಾಣಿಕರು ಭೇಟಿ ನೀಡಿದ್ದಾರೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಲಪಾತದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದಿದ್ದು, ಶೀಘ್ರವೇ ಗೋಕಾಕ ಪಾಲ್ಸ್ ನ್ನು ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಾಂಕಾ ಹಾಗೂ ಯುವ ನಾಯಕ ಜಾರಕಿಹೊಳಿ ಸೇರಿದಂತೆ ಸ್ಥಳೀಯ ರಾಹುಲ್, ವಿವಿಧ ಇಲಾಖೆ ಅಧಿಕಾರಿಗಳು.