ಬೆಳಗಾವಿ: ಬೆಳಗಾವಿ ಜಿಲ್ಲೆಯ ಅರಭಾವಿಮಠ ಗ್ರಾಮದ ದುರದುಂಡೇಶ್ವರ ಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ (75) ಭಾನುವಾರ ಲಿಂಗೈಕ್ಯರಾದರು.
ಶ್ರೀಗಳು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಮಠದಲ್ಲಿ ರಾತ್ರಿ ಪೂಜೆಗೆ ಸಿದ್ಧತೆ ನಡೆಸಿದ ವೇಳೆ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.