ಕಾರವಾರ: ಕಳಸಾ- ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಗೋವಾದವರು ಎಲ್ಲಿಗೆ ಬೇಕಾದರೂ ಹೋಗಲಿ. ನಾವು ಸುಪ್ರೀಂ ಕೋರ್ಟ್ ನಿರ್ದೇಶಿತ ಪೀಠದ ವರದಿಯಂತೆ ಕಾಮಗಾರಿಗಳನ್ನ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋವಾದವರು ಈಗಾಗಲೇ ಸುಪ್ರೀಂ ಕೋರ್ಟ್ ಗೆ ಹೋಗಿ ವಾಪಸ್ಸು ಬಂದಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶಿತ ಪೀಠ ರಚನೆಯಾಗಿ, ಅದರ ವರದಿಯ ಆಧಾರದಲ್ಲಿ ನೋಟಿಫಿಕೇಶನ್ ಮಾಡಲಾಗಿದೆ. ಡಿಪಿಆರ್ ಒಪ್ಪಿಗೆ ನೀಡಿದೆ. ಹೀಗಾಗಿ ಸುಪ್ರೀಂ ಕೋರ್ಟ್ ನ ಆದೇಶ ಹಾಗೂ ಪೀಠದ ವರದಿಯಂತೆ ಕಾಮಗಾರಿಗಳನ್ನ ನಡೆಸಲಿದ್ದೇವೆ ಎಂದು ತಿಳಿಸಿದರು.