Home ನಮ್ಮ ಜಿಲ್ಲೆ ಚಾಮರಾಜನಗರ ಚಿರತೆ ದಾಳಿಯಿಂದ ಗಂಭೀರ ಗಾಯಗೊಡಿದ್ದ ಬಾಲಕಿ ಸಾವು

ಚಿರತೆ ದಾಳಿಯಿಂದ ಗಂಭೀರ ಗಾಯಗೊಡಿದ್ದ ಬಾಲಕಿ ಸಾವು

0

ಚಾಮರಾಜನಗರ : ಚಿರತೆ ದಾಳಿಯಿಂದ ಗಂಭೀರ ಗಾಯಗೊಡಿದ್ದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಗ್ಗಲಿ ಗುಂದಿ ಗ್ರಾಮದ ಬಾಲಕಿ ಸುಶೀಲ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ. ಜೂ.26ರ ರಾತ್ರಿ ತಮ್ಮ ಮನೆ ಬಳಿ ಚಿರತೆ ದಾಳಿಗೆ ಸಿಲುಕಿದ್ದ ಬಾಲಕಿಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Exit mobile version