Home ನಮ್ಮ ಜಿಲ್ಲೆ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ : ಸಿಎಂ ಬೊಮ್ಮಾಯಿ

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ : ಸಿಎಂ ಬೊಮ್ಮಾಯಿ

0
BASAVARAJ BOMAI

ಬೆಂಗಳೂರು, ಮೈಸೂರು ಭಾಗಗಳಲ್ಲಿ ಇತ್ತೀಚಿಗೆ ಜನರ ಮೇಲೆ ಆಕ್ರಮಣ ಮಾಡಿರುವ ಚಿರತೆಗಳನ್ನು ಸೆರೆಹಿಡಿಯಲು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು, ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

Exit mobile version