ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧ ಇಲ್ಲ

0
17


ಮಂಗಳೂರು: ‘ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧವಿಲ್ಲ. ಆಕೆ ನಮ್ಮ ಸಂಘಟನೆಯ ಸದಸ್ಯೆ ಅಲ್ಲ’ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಕೆ ಉತ್ತಮ ಭಾಷಣ ಮಾಡುತ್ತಿದ್ದರು. ಆ ಕಾರಣಕ್ಕೆ ಬಜರಂಗ ದಳದ ಕಾರ್ಯಕ್ರಮಗಳಿಗೆ ಆಹ್ವಾನಿಸಿದ್ದು ನಿಜ. ಅವರು ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ಆಗಲಿ. ನಮ್ಮ ಸಂಘಟನೆ ಇಂತಹ ಅಕ್ರಮಗಳಿಗೆ ಆಸ್ಪದ ನೀಡುವುದಿಲ್ಲ. ಇಂತಹ ಪ್ರಕರಣಗಳು ಮರುಕಳಿಸಬಾರದು. ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರನ್ನು ಶಿಕ್ಷೆಗೆ ಒಳಪಡಿಸಬೇಕು’ ಎಂದರು.
‘ಈ ವಂಚನೆ ಪ್ರಕರಣದ ಬಗ್ಗೆ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿ ಎರಡು ತಿಂಗಳ ಹಿಂದೆ ನನ್ನ ಗಮನಕ್ಕೆ ತಂದಿದ್ದು ನಿಜ. ನೀವು ತಪ್ಪು ಮಾಡಿಲ್ಲವಾದರೆ ತಲೆಕೆಡಿಸಿಕೊಳ್ಳಬೇಡಿ ಎಂದು ಧೈರ್ಯ ಹೇಳಿದ್ದೆ’ ಎಂದರು.

Previous articleಸುಪ್ರೀಂ ತೀರ್ಪು ಖಂಡಿಸಿ ಕಾವೇರಿ ನದಿಗಿಳಿದು ಪ್ರತಿಭಟನೆ
Next article108 ಅಡಿ ಎತ್ತರದ ಶಂಕರಾಚಾರ್ಯರ ಪ್ರತಿಮೆ ಅನಾವರಣ