Home ನಮ್ಮ ಜಿಲ್ಲೆ ದಾವಣಗೆರೆ ಜಾಮೀನು ಪಡೆದ ಶಾಸಕನಿಗೆ ಅದ್ದೂರಿ ಸ್ವಾಗತ – ಖಾಸಗಿ ಸುದ್ದಿ ವಾಹಿನಿ ವರದಿಗಾರನ ಮೇಲೆ ಹಲ್ಲೆ

ಜಾಮೀನು ಪಡೆದ ಶಾಸಕನಿಗೆ ಅದ್ದೂರಿ ಸ್ವಾಗತ – ಖಾಸಗಿ ಸುದ್ದಿ ವಾಹಿನಿ ವರದಿಗಾರನ ಮೇಲೆ ಹಲ್ಲೆ

0

ದಾವಣಗೆರೆ: ಕೆಎಸ್ ಡಿಲ್ ನಲ್ಲಿ ಹಸ್ತಕ್ಷೇಪ ಮಾಡಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಚನ್ನಗಿರಿ ಶಾಸಕ ಮಾಡಾಳು ವಿರೂಕ್ಷಪ್ಪರ ಪುತ್ರನ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಡಾಳು ಅವರಿಗೆ ಹೈಕೋರ್ಟ್ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಆರೋಪಿ ವೈಯಕ್ತಿಕ 75 ಲಕ್ಷ ಮೊತ್ತದ ಬಾಂಡ್ ಸಲ್ಲಿಸಬೇಕು. ಇಬ್ಬರು ಭದ್ರತೆ ಕೊಡಬೇಕು. ಸಾಕ್ಷಿ ನಾಶಕ್ಕೆ ಪ್ರಯತ್ನಿಸಬಾರದು. ತನಿಖೆಗೆ ಸಹಕರಿಸಬೇಕು. ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಬಹಿರಂಗಗೊಂಡ ನಂತರ ನಾಪತ್ತೆಯಾಗಿದ್ದ ಶಾಸಕ ಮಾಡಾಳು ವಿರೂಪಾಕ್ಣಪ್ಪ ಕಳೆದ ಮೂರ್ನಾಲ್ಕು ದಿನಗಳ ನಂತರ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಚನ್ನಗಿರಿಯ ಅವರ ಸ್ವಗ್ರಾಮವಾದ ಚನ್ನೇಶಪುರಕ್ಕೆ ಆಗಮಿಸಿದ ವೇಳೆ ಬಿಜೆಪಿ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಅವರಿಗೆ ಮೆರವಣಿಗೆ ಮಾಡಿ ಜೈಕಾರ ಕೂಗು ಮೂಲಕ ಅವರನ್ನು ಸ್ವಾಗತಿಸಿದರು. ಈ ವೇಳೆ ಖಾಸಗಿ ಸುದ್ದಿವಾಹಿನಿಯ ವರದಿಗಾರ ಮತ್ತು ಕ್ಯಾಮೆರಾಮೆನ್ ಮೇಲೆ ಕಾರ್ಯಕರ್ತರು ಹಲ್ಲೆ ಮಾಡಿರುವುದು ವರದಿಯಾಗಿದೆ.

Exit mobile version