ಶ್ರೀರಂಗಪಟ್ಟಣ : ಇತಿಹಾಸ ಪ್ರಸಿದ್ಧ ಧಾರ್ಮಿಕ ಪರಂಪರೆಯುಳ್ಳ ಶ್ರೀರಂಗಪಟ್ಟಣದ ದಸರಾ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಅ.16 ರಿಂದ ಅ.18ರ ವರೆಗೆ ನಡೆಯಲಿರುವ ವೇಧಿಕೆ ನಿರ್ಮಾಣ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಡಾ.ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದರು.
ಪಟ್ಟಣದ ಶ್ರೀರಂಗನಾಥಸ್ವಾಮಿ ದೇಗುಲದ ಬಳಿಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ “ಶ್ರೀರಂಗ ವೇದಿಕೆ”ಯ ಸ್ಥಳ ಪರಿಶೀಲನೆ ಮಾಡಿದ ಅವರು, ಪುಸ್ತಕ ಪ್ರದರ್ಶನ , ಆಹಾರ ಮೇಳ, ಆರೋಗ್ಯಕ್ಕೆ ಮೇಳಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಮಾಹಿತಿಗಳು ಸ್ಪಷ್ಟವಾಗಿ ಗೋಚರಿಸುವಂತೆ ಕ್ರಮ ಸಂಖ್ಯೆ ಹಾಗೂ ದಪ್ಪ ಅಕ್ಷರಗಳಲ್ಲಿ ಫಲಕಗಳನ್ನು ಅಳವಡಿಸಬೇಕು. ಕಾರ್ಯಕ್ರಮವನ್ನು ವೀಕ್ಷಿಸಲು ಬರುವ ಸಾರ್ವಜನಿಕರು , ಪ್ರವಾಸಿಗರು ಹಾಗೂ ಗಣ್ಯರಿಗೆ ಯಾವುದೇ ಅಡೆ-ತಡೆಯಾಗದಂತೆ ಎಚ್ಚರ ವಹಿಸುವುದು. ಕಲಾವಿದರುಗಳಿಗೆ ಆಹಾರ ವಿತರಣೆಯಲ್ಲಿ ಯಾವುದೇ ಕೊರತೆ ಆಗದಂತೆ ಮುಂಜಾಗ್ರತೆ ವಹಿಸುವುದು. ಶೌಚಾಲಯ ಸೇರಿದಂತೆ ಇತರ ಸುರಕ್ಷತೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜು, ಉಪ ವಿಭಾಗಾಧಿಕಾರಿ ನಂದೀಶ್, ತಹಸಿಲ್ದಾರ್ ಅಶ್ವಿನಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೇಣು, ಮಂಡ್ಯ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಶ್ರೀನಿವಾಸ್ ಗೌಡ, ತಾಲೂಕು ಪಂಚಾಯಿತಿ ಅಧಿಕಾರಿಗಳಾದ ರಮೇಶ್ ,ಮೃತ್ಯುಂಜಯ ಸೇರಿದಂತೆ ಇತರರು ಉಪಸ್ಥಿತರಿದ್ದರು.