Home ತಾಜಾ ಸುದ್ದಿ ಡಾ. ಎಸ್.ಎಸ್. ಸ್ವಾಮಿನಾಥನ್ ನಿಧನಕ್ಕೆ ಗಣ್ಯರ ಸಂತಾಪ

ಡಾ. ಎಸ್.ಎಸ್. ಸ್ವಾಮಿನಾಥನ್ ನಿಧನಕ್ಕೆ ಗಣ್ಯರ ಸಂತಾಪ

0

ಬೆಂಗಳೂರು: ಖ್ಯಾತ ಕೃಷಿ ತಜ್ಞ ಡಾ. ಎಂ.ಎಸ್. ಸ್ವಾಮಿನಾಥನ್ ಅವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಾ. ಎಂ.ಎಸ್. ಸ್ವಾಮಿನಾಥನ್ ಅವರು ಭಾರತ ಕಂಡ ಶ್ರೇಷ್ಠ ಕೃಷಿ ವಿಜ್ಞಾನಿ. ಭಾರತದ ಆರ್ಥಿಕತೆಯ ಪ್ರಮುಖ ಬೆನ್ನೆಲುಬಾಗಿರುವ ಕೃಷಿ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾದುದು. ಅವರು ಇಂದು ಇಹಲೋಕವನ್ನು ತ್ಯಜಿಸಿರುವುದು ಭಾರತದ ಕೃಷಿ ವಲಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ‌.

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಸಿಎಂ ಡಿ.ಕೆ. ಶಿವಕುಮಾರ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Exit mobile version