Home ತಾಜಾ ಸುದ್ದಿ ಡಾ. ಕೋರೆ ಅಮೃತ ಮಹೋತ್ಸವಕ್ಕೆ ಲಕ್ಷ ಜನ

ಡಾ. ಕೋರೆ ಅಮೃತ ಮಹೋತ್ಸವಕ್ಕೆ ಲಕ್ಷ ಜನ

0
Prabhakar Kore

ಬೆಳಗಾವಿ: ಒಬ್ಬ ವ್ಯಕ್ತಿ ಎಲ್ಲ ಕ್ಷೇತ್ರದಲ್ಲೂ ಸೈ ಎನಿಸಿಕೊಳ್ಳಬಹುದು ಎನ್ನುವುದಕ್ಕೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಉತ್ತಮ ಉದಾಹರಣೆ. ಅಂತಹ ಅದ್ಭುತ ವ್ಯಕ್ತಿಯ ಅಮೃತ ಮಹೋತ್ಸವಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಭಾಕರ ಕೋರೆಯವರ ಅಮೃತ ಮಹೋತ್ಸವ ಸಮಿತಿ ನಿರ್ಧಾರದಂತೆ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಕೆಎಲ್‌ಇ ಸಂಸ್ಥೆ, ಚಿಕ್ಕೋಡಿಯ ಚಿದಾನಂದ ಬಸವಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ, ಅಂಕಲಿಯ ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೊಸೈಟಿ ಮತ್ತು ಬೆಳಗಾವಿಯ ರಾಣಿ ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ವತಿಯಿಂದ ಇದೇ ದಿ. 15ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಹುಟ್ಟು ಹಬ್ಬದ ನಿಮಿತ್ತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಧ್ಯದ ಪ್ರಕಾರ ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಅವರು ವಿವರಿಸಿದರು.

Exit mobile version