Home Advertisement
Home ತಾಜಾ ಸುದ್ದಿ ಡಿಕೆಶಿ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ

ಡಿಕೆಶಿ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ

0
120
ಸತೀಶ ಜಾರಕಿಹೊಳಿ

ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ನನ್ನ ನಡುವೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಲೋಕೊಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಅಥವಾ ಡಿಸಿಎಂ ಆಗುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಈ ರೀತಿ ಉತ್ತರ ನೀಡಿದರು.
ಸದ್ಯಕ್ಕೆ ಅಂತಹ ಚರ್ಚೆ ಏನೂ ನಡೆದಿಲ್ಲ. ಸಂಘಟನೆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ ಅವರು ನಮ್ಮ ಮನೆಗೆ ಬಂದಿರುತ್ತಾರೆ. ಇನ್ನು ಡಿ.ಕೆ. ಸುರೇಶ ಅವರೂ ಸಹ ಬರತ್ತಾರೆ. ಈಗ ಎಲ್ಲರೂ ಚುನಾವಣೆಯಲ್ಲಿ ಬಿಜಿಯಾಗಿದ್ದಾರೆ. ಯಾರಿಗೆ ಏನ್ ಮಾಡಬೇಕು ಅನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡಬೇಕು. ಚುನಾವಣೆ ಮುಗಿದ ಮೇಲೆ ಏನಾಗುತ್ತದೆ ನೋಡಬೇಕು ಎಂದರು.

Previous articleಅತ್ತು ಕರೆದು ಮಾಡಿರುವ ರೀತಿಯಲ್ಲಿ ಬಿಜೆಪಿ ಅಧ್ಯಕ್ಷರ ಆಯ್ಕೆ
Next articleಕರೆ ಮಾಡಿ ಹಣ‌ ಎಗರಿಸಿದ ಖದೀಮರು