ಗಂಗಾವತಿ (ಕೊಪ್ಪಳ): ಡಿಜೆ ಸೌಂಡ್‌ಗೆ ಯುವಕನೊಬ್ಬ ಕುಣಿಯುವಾಗಲೇ ಹೃದಯಾಘಾತವಾಗಿ ಮೃತಪಟ್ಟ ಘಟನೆ ನಡೆದಿದೆ.
ಕೊಪ್ಪಳ ರಸ್ತೆಯಲ್ಲಿರುವ ಪ್ರಶಾಂತ ನಗರದ 21ನೇ ದಿನದ ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ, ಸುದೀಪ್ ಸಜ್ಜನ್ (30) ಮೃತ ಯುವಕ. ಗಂಗಾವತಿಯ ಪ್ರಶಾಂತ ನಗರದ ಯುವಕರಿಂದ ಡಿಜೆ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸೌಂಡ್ ಹಾಕಿ ಡ್ಯಾನ್ಸ್ ಮಾಡಲಾಗುತ್ತಿತ್ತು. ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದು, ಕೆಲ ಹೊತ್ತಿನ ಬಳಿಕ ಕುಸಿದು ಬಿದ್ದಿದ್ದಾನೆ. ಘಟನೆಯಿಂದ ಡಿಜೆ ಬಂದ್ ಮಾಡಲಾಯಿತು. ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು. ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























