ಡಿಸೆಂಬರ್ ಒಳಗೆ ಶರಾವತಿ ಸಂತ್ರಸ್ತರ ಸಮಸ್ಯೆಗೆ ಪರಿಹಾರ

ತೀರ್ಥಹಳ್ಳಿ: ಡಿಸೆಂಬರ್ ಅಂತ್ಯದ ಒಳಗೆ ಶರಾವತಿ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.
ವಿವಿಧ ಇಲಾಖೆಗಳ ೬೧೮ ಕೋಟಿ ರೂ.ಗಳ ಕಾಮಗಾರಿಗಳಿಗೆ ಉದ್ಘಾಟನಾ ಸಮಾರಂಭ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಡೀಮ್ಡ್ ಅರಣ್ಯ ಪ್ರದೇಶ ಕಂದಾಯ ಭೂಮಿಯಾಗಿ ಪರಿವರ್ತಿಸುವ ಹೇಳಿಕೆ ನೀಡಿದ್ದಾರೆ.
ಹಿಂದಿನ ಶಾಸಕರ ಅವಧಿಯಲ್ಲಿ ಶಂಕುಸ್ಥಾಪನೆ ಮಾಡಿದ್ದ ಕೋಟಿ ಕೋಟಿ ಹಣ ಎಲ್ಲಿ ಹೋಯಿತು? ಎಂದು ಕೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಮಾಡಿದ್ದ ಶಂಕುಸ್ಥಾಪನೆ ಕುರಿತಾಗಿ ಪ್ರಶ್ನಿಸಿದರು. ತಮ್ಮ ಸರ್ಕಾರವು ಹಣಕಾಸಿನ ಅನುಮೋದನೆಗೊಳಿಸಿಯೇ ಆಡಳಿತಾತ್ಮಕ ಒಪ್ಪಿಗೆ ಪಡೆದೇ ಶಂಕುಸ್ಥಾಪನೆ ಮಾಡಿದ್ದೇವೆ. ಹಿಂದಿನ ಸರ್ಕಾರಗಳಂತೆ ಸುಮ್ಮನೆ ಶಂಕುಸ್ಥಾಪನೆ ಮಾಡುತ್ತಿಲ್ಲ ಎಂದರು.