Home ನಮ್ಮ ಜಿಲ್ಲೆ ತಜ್ಞರ ಸಲಹೆ ಪಡೆದು ಮುಂದಿನ ಕ್ರಮ: ಸಿಎಂ

ತಜ್ಞರ ಸಲಹೆ ಪಡೆದು ಮುಂದಿನ ಕ್ರಮ: ಸಿಎಂ

0
CM

ಬೆಳಗಾವಿ: ಹೊರ ದೇಶಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗಿರುವ ಕಾರಣ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದು, ಈ ಕುರಿತು ನಾನು ಗುರುವಾರ ಮಧ್ಯಾಹ್ನ ಆರೋಗ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮತ್ತು ತಜ್ಞರ ಸಮಿತಿಯೊಂದಿಗೆ ತುರ್ತು ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಸೋಂಕಿನ ಬಗ್ಗೆ ತಜ್ಞರ ಸಮಿತಿಯ ಸಲಹೆ ಪಡೆದು ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಬೂಸ್ಟರ್ ಡೋಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಚಿಂತನೆ ನಡೆಸುತ್ತೇವೆ. ಸಾರ್ವಜನಿಕರು ಯಾವುದೇ ರೀತಿ ಭಯಭೀತರಾಗಬಾರದು ಎಂದರು.

Exit mobile version