Home ನಮ್ಮ ಜಿಲ್ಲೆ ಧಾರವಾಡ ತಡರಾತ್ರಿ ಹುಬ್ಬಳ್ಳಿಗೆ ಬಂದಿಳಿದ ಕೇಜ್ರಿವಾಲ್‌

ತಡರಾತ್ರಿ ಹುಬ್ಬಳ್ಳಿಗೆ ಬಂದಿಳಿದ ಕೇಜ್ರಿವಾಲ್‌

0
arvind-kejriwal

ಹುಬ್ಬಳ್ಳಿ: ಕರ್ನಾಟಕದಲ್ಲಿಯೂ ಆಮ್‌ ಆದ್ಮಿ ಪಕ್ಷ ವಿಧಾನ ಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಪಕ್ಷದ ಪ್ರಚಾರಕ್ಕಾಗಿ ತಡರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಭಗವಂತ ಮಾನ್ ಬಂದಿಳಿದಿದ್ದಾರೆ.
ಇದೇ ಮೊದಲ ಬಾರಿಗೆ ಆಗಮಿಸಿದ ಉಭಯ ನಾಯಕರಿಗೆ ವಾಣಿಜ್ಯನಗರಿಗೆ ಆಪ್ ನಾಯಕರು ಅದ್ದೂರಿಯಾಗಿ ಸ್ವಾಗತ ನೀಡಿದರು. ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಕರ್ನಾಟಕದ ಮಧ್ಯ ಭಾಗದಿಂದಲೇ ಪಕ್ಷ ಸಂಘಟನೆಗೆ ‌ಅರವಿಂದ ಕೇಜ್ರಿವಾಲ್ ಮುಂದಾಗಿದ್ದಾರೆ. ದಾವಣಗೆರೆಯಲ್ಲಿ ನಡೆಯುವ ಬ್ಲಾಕ್ ಸದಸ್ಯರ ಪ್ರಮಾಣ ವಚನದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Exit mobile version