ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ತಮಿಳುನಾಡಿಗೆ ಮುಂದಿನ 15 ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ್ಕೆ ಆದೇಶ ನೀಡಿದೆ.
ಮಂಗಳವಾರ ವರ್ಚುವಲ್ ಮೂಲಕ ನಡೆದ ನಿಯಂತ್ರಣ ಸಮಿತಿ ಸಭೆಯಲ್ಲಿ ಎರಡು ಕಡೆಯ ವಾದವನ್ನು ಆಲಿಸಿದ ಸಮಿತಿ ಕರ್ನಾಟಕಕ್ಕೆ ಅಲ್ಪ ರಿಲೀಫ್ ನೀಡಿದೆ. ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಈಗ ಈ ಪ್ರಮಾಣವನ್ನು ಐದು ಸಾವಿರದಿಂದ ಮೂರು ಸಾವಿರಕ್ಕೆ ಇಳಿಸಿದೆ.
ಸೆ. 28ರಿಂದ ಹೊಸ ಆದೇಶ ಜಾರಿಗೆ ಬರಲಿದೆ. ಆಗ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ. ಈ ಆದೇಶವು ಅಕ್ಟೋಬರ್ 15ರವರೆಗೆ ಜಾರಿಯಲ್ಲಿ ಇರಲಿದ್ದು, ಅಲ್ಲಿವರೆಗೆ ಪ್ರತಿ ದಿನವೂ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕಾಗುತ್ತದೆ.