Home ನಮ್ಮ ಜಿಲ್ಲೆ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಬೆಳಗಾವಿ ಮೂಲದ ಐವರ ದುರ್ಮರಣ

ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಬೆಳಗಾವಿ ಮೂಲದ ಐವರ ದುರ್ಮರಣ

0

ಹೈದ್ರಾಬಾದ್: ಆಂಧ್ರಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಬೆಳಗಾವಿ ಐದು ಮಂದಿ ಭಕ್ತರು ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ ,ಬೆಳಗಾವಿ ಜಿಲ್ಲೆಯ ನಿವಾಸಿಗಳು ಕ್ರೂಸರ್ ವಾಹನದ ಮೂಲಕ ತಿರುಪತಿ ಪ್ರವಾಸ ಕೈಗೊಂಡಿದ್ದರು. ಮಠಂಪಲ್ಲಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿ 16 ಜನರು ಪ್ರಯಾಣಿಸುತ್ತಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸಮೀಪದ ರುಯಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಜರುಗಿದೆ.

https://samyuktakarnataka.in/lt-%e0%b2%95%e0%b2%82%e0%b2%aa%e0%b2%a8%e0%b2%bf%e0%b2%97%e0%b3%86-%e0%b2%aa%e0%b2%be%e0%b2%b2%e0%b2%bf%e0%b2%95%e0%b3%86-%e0%b3%a8%e0%b3%a6-%e0%b2%95%e0%b3%8b%e0%b2%9f%e0%b2%bf-%e0%b2%a6/

Exit mobile version