SK Home Ad
Home ನಮ್ಮ ಜಿಲ್ಲೆ ತುಮಕೂರು ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ: ಡಾ. ಜಿ. ಪರಮೇಶ್ವರ

ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ: ಡಾ. ಜಿ. ಪರಮೇಶ್ವರ

0
55

ತುಮಕೂರು : ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಯನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ನಡೆಸಿದರು. ಸಭೆಯಲ್ಲಿ ಬರ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆ, ಮೇವು ಕೊರತೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸೇರಿದಂತೆ ಹಲವು ವಿಷಯಗಳ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಕುಡಿಯುವ ನೀರಿಗೆ ಮೊದಲ ಆದ್ಯತೆ : ಬರ ಪರಿಸ್ಥಿತಿ ಎದುರಿಸಲು ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದ ಡಿಸಿಎಂ, ಅಗತ್ಯವಿರುವ ಕಡೆಗಳಲ್ಲಿ ಕೂಡಲೇ ಬೋರ್‌ವೆಲ್ ಕೊರೆಸಬೇಕು ಮತ್ತು ಅವುಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: ದಾವಣಗೆರೆ : ನೀಟ್‌ನಲ್ಲಿ ರಾಜ್ಯದ ದ್ವಿತೀಯ ರ‍್ಯಾಂಕ್ ಪಡೆದ ಸುಚಿತಾ

“ಈ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸುವುದಿಲ್ಲ. ನಿಯಮಗಳನ್ನು ನೋಡುತ್ತ ಕುಳಿತರೆ ಜನರ ಸಮಸ್ಯೆಗಳು ಹೆಚ್ಚಾಗುತ್ತವೆ. ತುರ್ತು ನಿರ್ಧಾರಗಳನ್ನು ತೆಗೆದುಕೊಂಡು ಸಮಸ್ಯೆಗಳನ್ನು ಪರಿಹರಿಸಬೇಕು,” ಎಂದು ಹೇಳಿದರು.

ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ : ಜಿಲ್ಲೆಗೆ ಭೇಟಿ ನೀಡುವ ಎಲ್ಲ ಅಧಿಕಾರಿಗಳು ಸ್ಥಳೀಯ ಶಾಸಕರನ್ನು ಭೇಟಿ ಮಾಡಿ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಬೇಕು. ಜನಪ್ರತಿನಿಧಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು. “ಒಂದು ದೂರು ಬಂದರೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಶಾಸಕರಿಗೆ ಸಹಕಾರ ನೀಡದಿದ್ದರೆ ಜಿಲ್ಲೆಗೆ ಏಕೆ ಬರುತ್ತೀರಿ?” ಎಂದು ಡಿಸಿಎಂ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಬಂಟ್ವಾಳ ಯುವತಿ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಆರೋಪಿ ಬಂಧನ

ರೈತರಿಗೆ ಮೇವಿನ ಬೀಜ ವಿತರಣೆ : ರಾಜ್ಯಾದ್ಯಂತ ಬರ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ವಾರದೊಳಗೆ ಮೇವಿನ ಬೀಜಗಳನ್ನು ವಿತರಿಸಲು ಸೂಚನೆ ನೀಡಿದರು. ನೀರಿನ ಲಭ್ಯತೆ ಇರುವ ಪ್ರದೇಶಗಳಲ್ಲಿ ಮೇವು ಬೆಳೆಯಲು ಮುಂದಾಗುವ ರೈತರಿಗೆ ಅಗತ್ಯ ನೆರವು ನೀಡಬೇಕು ಎಂದರು. ದೇಶದ ಬಹುತೇಕ ಭಾಗಗಳಲ್ಲಿ ಬರ ಪರಿಸ್ಥಿತಿ ಇರುವುದರಿಂದ ಬೇರೆ ರಾಜ್ಯಗಳಿಂದ ಮೇವು ತರಿಸುವುದು ಕಷ್ಟಕರವಾಗಿದೆ. ಹೀಗಾಗಿ ಸ್ಥಳೀಯ ಮಟ್ಟದಲ್ಲೇ ಮೇವು ಉತ್ಪಾದನೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.

ಟಾಸ್ಕ್ ಫೋರ್ಸ್ ಸಭೆಗಳನ್ನು ನಿರಂತರವಾಗಿ ನಡೆಸಿ : ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಭೆಗಳನ್ನು ನಿರಂತರವಾಗಿ ನಡೆಸಿ, ಬರ ಪರಿಸ್ಥಿತಿಯ ವರದಿಯನ್ನು ಜಿಲ್ಲಾ ಆಡಳಿತಕ್ಕೆ ಸಲ್ಲಿಸುವಂತೆ ಸೂಚಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ಇದನ್ನೂ ಓದಿ: ‘ಏನೇ ಆದರೂ ಜುಲೈ 20ರವರೆಗೆ ಜೀವಂತವಾಗಿರುತ್ತೇನೆ’: ವಾಂಗ್‌ಚುಕ್

ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರಿಕೆ : ಡೆಂಘಿ, ಚಿಕೂನ್‌ಗುನ್ಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಿದರು. ಪಾವಗಡ ಗಡಿಭಾಗದ ಆಂಧ್ರ ಪ್ರದೇಶದಲ್ಲಿ ಕೋವಿಡ್ ಪ್ರಕರಣ ಪತ್ತೆಯಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಿದರು.

ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು : ರಾಜ್ಯದ ಅನೇಕ ಕಡೆಗಳಲ್ಲಿ ಓವರ್‌ಹೆಡ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಡಿಸಿಎಂ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಿ ಶುದ್ಧ ನೀರು ಪೂರೈಕೆ ಮಾಡುವಂತೆ ಸೂಚಿಸಿದರು.

ಇದನ್ನೂ ಓದಿ: ಚಲಿಸುವ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ನಿಧನ

ಮೋಡ ಬಿತ್ತನೆ ಕುರಿತು ಚರ್ಚೆ : ಜುಲೈ 25ರಂದು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬೆಂಗಳೂರು ಕಂದಾಯ ವಿಭಾಗದ ಸಭೆಯಲ್ಲಿ ಮೋಡ ಬಿತ್ತನೆ ಕುರಿತು ಚರ್ಚೆ ನಡೆಯಲಿದ್ದು, ಅದರ ಪರಿಣಾಮಕಾರಿತ್ವದ ವರದಿಯನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಡಾ. ಪರಮೇಶ್ವರ ತಿಳಿಸಿದರು.