ದಲಿತರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್

0
12

ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೇ ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದು ೭೫ ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು. ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದುಕೊಂಡು ಅಡ್ಡಾಡೋದು ಅಭ್ಯಾಸವಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ೧೪ ಕೋಟಿಗು ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಿದ್ದಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

Previous articleಬೆಂಕಿ ಅವಘಡ : ಮತದಾನದಿಂದ ಉಳಿದ ಜೀವಗಳು
Next articleಕೈ ಕೊಟ್ಟ ಮತಯಂತ್ರ: ವಡಿಯಾಂಡಳ್ಳಿ ಗ್ರಾಮದಲ್ಲಿ 7:30 ರ ವರೆಗೂ ಮುಂದುವರೆದ ಮತದಾನ