Home ತಾಜಾ ಸುದ್ದಿ ಧಾರವಾಡ ಜಿಲ್ಲೆ: ಕಾಂಗ್ರೆಸ್ ಮುನ್ನಡೆ

ಧಾರವಾಡ ಜಿಲ್ಲೆ: ಕಾಂಗ್ರೆಸ್ ಮುನ್ನಡೆ

0

ಧಾರವಾಡ: ಧಾರವಾಡ ಜಿಲ್ಲೆಯ 7 ಕ್ಷೇತ್ರಗಳಲ್ಲಿ 4 ಕಡೆ ಕಾಂಗ್ರೆಸ್, 3 ಕಡೆ ಬಿಜೆಪಿ ಮುನ್ನಡೆ ಸಾಧಿಸಿವೆ.
ಜಿದ್ದಾಜಿದ್ದಿ ಕ್ಷೇತ್ರಗಳಾದ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಕಲಘಟಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸಂತೋಷ ಲಾಡ್, ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿಯ ಎಂ.ಅರ್. ಪಾಟೀಲ, ಪೂರ್ವ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ಅಬ್ಬಯ್ಯ, ನವಲಗುಂದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎನ್.ಎಚ್ ಕೋನರಡ್ಡಿ, ಹು- ಧಾ ಪಶ್ಚಿಮ ಕ್ಷೇತ್ರದಲ್ಲಿ ಬಿಜೆಪಿಯ ಅರವಿಂದ ಬೆಲ್ಲದ ಸತತ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹು- ಧಾ ಸೆಂಟ್ರಲ್ ಕ್ಷೇತ್ರದಲ್ಲಿ ಆರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ ಹಿನ್ನಡೆಯಲ್ಲಿದ್ದಾರೆ. ಸೆಂಟ್ರಲ್ ಕ್ಷೇತ್ರದಲ್ಲಿ 19 ಸುತ್ತು ಮತ ಎಣಿಕೆ ನಡೆಯಲಿದ್ದು, ಈಗ 6 ಸುತ್ತು ಮತ ಎಣಿಕೆ ಮುಕ್ತಾಯವಾಗಿದೆ.
ಕುಂದಗೋಳ ಕ್ಷೇತ್ರದಲ್ಲಿ ಹಾಲಿ ಶಾಸಕಿ ಕುಸುಮಾವತಿ, ನವಲಗುಂದ ಕ್ಷೇತ್ರದ ಅಭ್ಯರ್ಥಿ, ಹಾಲಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಆರಂಭದಿಂದಲೂ ಹಿನ್ನಡೆಯಲ್ಲಿದ್ದಾರೆ.
ಪೂರ್ವ ಕ್ಷೇತ್ರದಲ್ಲಿ ಡಾ. ಕ್ರಾಂತಿಕಿರಣ ಅವರೂ ಹಿನ್ನಡೆಯಲ್ಲಿದ್ದಾರೆ

Exit mobile version