Home ನಮ್ಮ ಜಿಲ್ಲೆ ಚಿಕ್ಕಮಗಳೂರು ನದಿಗೆ ಬಿದ್ದ ಮಗ: ಉಳಿಸಲು ಹೋದ ತಂದೆ ಮಗನೊಂದಿಗೆ ಸಾವು

ನದಿಗೆ ಬಿದ್ದ ಮಗ: ಉಳಿಸಲು ಹೋದ ತಂದೆ ಮಗನೊಂದಿಗೆ ಸಾವು

0

ಚಿಕ್ಕಮಗಳೂರು: ಆಕಸ್ಮಿಕವಾಗಿ ನದಿಗೆ ಬಿದ್ದ ಮಗನನ್ನು ಉಳಿಸಲು ಹೋಗಿ, ತಂದೆ ಮಗ ಇಬ್ಬರೂ ಮೃತಪಟ್ಟ ಮನಕುಲಕುವ ಘಟನೆ ನಡೆದಿದೆ.
ಮೃತರನ್ನು ಮೂಡಿಗೆರೆ ಸಮೀಪದ ಹಂಡುಗುಳಿ ಗ್ರಾಮದ ಲೋಕೇಶ್(40 ವರ್ಷ) ಮತ್ತು ಅವರ ಮಗ ಸಾತ್ವಿಕ್(13 ವರ್ಷ) ಎಂದು ಗುರುತಿಸಲಾಗಿದೆ.
ಮಾಗುಂಡಿ ಸಮೀಪದ ಹುಯ್ಗೆರೆ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮನೆಗೆ ಸುಗ್ಗಿ ಹಬ್ಬಕ್ಕೆಂದು ಲೋಕೇಶ್ ತನ್ನ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ತೆರಳಿದ್ದರು.
ಮನೆಯ ಸಮೀಪದಲ್ಲೇ ಹರಿಯುತ್ತಿರುವ ಭದ್ರಾ ನದಿಯ ಬಳಿಗೆ ಸಂಬಂಧಿಕರು ತೆರಳಿದ್ದರು. ಹೊಳೆಯಲ್ಲಿ ಬಂಡೆಯೊಂದರ ಮೇಲೆ ನಿಂತಿದ್ದ ಸಾತ್ವಿಕ್ ಜಾರಿ ನೀರಿಗೆ ಬಿದ್ದಿದ್ದಾನೆ.
ಈ ಸಂದರ್ಭದಲ್ಲಿ ಮಗನನ್ನು ರಕ್ಷಿಸಲು ತಂದೆ ಲೋಕೇಶ್ ನದಿಗೆ ಹಾರಿದ್ದಾರೆ. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.
ಕುಟುಂಬದವರ ಕಣ್ಣೆದುರೆ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಸಂಬಂಧಿಕರು ನಡೆಸಿದ ಪ್ರಯತ್ನ ವಿಫಲವಾಗಿದೆ.
ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿ ಹಂಡುಗುಳಿ ಗ್ರಾಮಕ್ಕೆ ತರಲಾಗಿದೆ

Exit mobile version