Home ನಮ್ಮ ಜಿಲ್ಲೆ ಕೊಪ್ಪಳ ನನ್ನ ಸ್ಪರ್ಧೆ ನಿಶ್ಚಿತ: ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ

ನನ್ನ ಸ್ಪರ್ಧೆ ನಿಶ್ಚಿತ: ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ

0

ಕುಷ್ಟಗಿ: ಮುಂಬರುವ 2023ರ ಚುನಾವಣೆಯಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಖಂಡಿತವಾಗಿ ನಾನೇ ಸ್ಪರ್ಧೆ ಮಾಡುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈಗಾಗಲೇ ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಮುಖಂಡರು ಚರ್ಚೆ ಮಾಡಿದಂತೆ ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಒಂದು ವೇಳೆ ಹಾಲಿ ಶಾಸಕರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹಿಂದೇಟು ಹಾಕಿದರೆ ಬೇರೆಯವರಿಗೆ ಕೊಡುತ್ತೇವೆ ಎಂದು ಮುಖಂಡರುಗಳು ಹೇಳಿದ್ದಾರೆ. ಈಗಾಗಲೇ ರಾಜ್ಯಮಟ್ಟದ ನಾಯಕರು ಮತ್ತು ರಾಷ್ಟ್ರಮಟ್ಟದ ನಾಯಕರು ನನಗೆ ಭರವಸೆ ನೀಡಿದ್ದಾರೆ ಎಂದರು.
ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಎಂಬುದನ್ನು ಸಿದ್ದರಾಮಯ್ಯ ಅವರು ಈಗಾಗಲೇ ಬಹಿರಂಗವಾಗಿಯೇ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಕುಷ್ಟಗಿಯಲ್ಲಿ ಮಾಜಿ ಶಾಸಕ ಹಸನಸಾಬ ದೋಟಿಹಾಳರಿಗೆ ಟಿಕೆಟ್ ನೀಡಿದರೂ ಸಂತೋಷ. ಅವರ ಗೆಲುವಿಗೆ ನಾನು ಶ್ರಮಿಸುತ್ತೇನೆ ಎಂದರು.
ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಶಿವರಾಜ್ ತಂಗಡಗಿ, ಗಂಗಾವತಿಯ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಚುನಾವಣೆಯಲ್ಲಿ ಸೋತಿದ್ದರು ಸಹ ಕ್ಷೇತ್ರಾದ್ಯಂತ ಅನೇಕ ಪ್ರವಾಸಗಳನ್ನು ಕೈಗೊಂಡು ಪಕ್ಷದ ಸಂಘಟನೆ ಮಾಡಿದ್ದಾರೆ. ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ ಎಂದರು.

ನನ್ನ ಸ್ಪರ್ಧೆ ನಿಶ್ಚಿತ: ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ

Exit mobile version