Home Advertisement
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ನರ್ತನ ಸೇವೆಯಲ್ಲಿಯೇ ದೈವ ನರ್ತಕ ಸಾವು

ನರ್ತನ ಸೇವೆಯಲ್ಲಿಯೇ ದೈವ ನರ್ತಕ ಸಾವು

0
180
ನರ್ತಕ

ಮಂಗಳೂರು: ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರು ಪಡೆದಿದ್ದ ಕಾಂತು ಅಜಿಲ ಮೂಲಂಗೀರಿ (೫೫) ಮೃತರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿದ್ದರು.
ರಾತ್ರಿ ೨ ಗಂಟೆ ಸುಮಾರಿಗೆ ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲಕಾರಿಯಾಗಿಲ್ಲ. ಘಟನೆ ನಡೆಯುವ ವೇಳೆ ಕಾಂತು ಅಜಿಲರವರು ಶಿರಾಡಿ ದೈವಕ್ಕೆ ನರ್ತನ ಸೇವೆ ನೀಡುತ್ತಿದ್ದರು. ಅವರ ಜತೆ ಕಲ್ಕುಡ ದೈವದ ಪಾತ್ರಿ ನರ್ತನ ಸೇವೆ ನೀಡುತ್ತಿದ್ದರು. ಅದಕ್ಕೂ ಮೊದಲು ಬರ್ಮೆರ್ ಹಾಗೂ ಗಿಣಿ ರಾಮ ದೈವಕ್ಕೆ ನೇಮೋತ್ಸವ ನಡೆದಿತ್ತು. ನರ್ತನ ಸೇವೆಯ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕಾಂತು ಅಜಿಲರವರು ನಿಧನ ಹೊಂದಿರಬಹುದೆನ್ನಲಾಗಿದೆ.