Home News ನವಿಲು ಗರಿ ಇಟ್ಟವರನ್ನು ಜೈಲಿಗಟ್ಟಿ

ನವಿಲು ಗರಿ ಇಟ್ಟವರನ್ನು ಜೈಲಿಗಟ್ಟಿ

ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇವಲ ಹಿಂದೂ ನಂಬಿಕೆಗಳನ್ನೇ ಟಾರ್ಗೆಟ್ ಮಾಡಬೇಡಿ. ಎಲ್ಲರ ವಿರುದ್ಧವೂ ಸಮಾನವಾಗಿಯೇ ಕ್ರಮ ತೆಗೆದುಕೊಳ್ಳಿ. ನವಿಲು ಗರಿ ಇಟ್ಟುಕೊಂಡ ದರ್ಗಾ, ಮಸೀದಿ ಮೇಲೂ ದಾಳಿ ಮಾಡಿ. ಮುಸ್ಲಿಂ ಮೌಲ್ವಿಗಳ ವಿರುದ್ಧ ಕೇಸ್ ಹಾಕಿ. ಎಲ್ಲಾ ಮೌಲ್ವಿಗಳಿಗೂ ಏಳು ವರ್ಷಗಳ ಜೈಲು ಶಿಕ್ಷೆ ಕೊಡಿಸಿ. ಆಗ ನಿಮ್ಮ ಅರಣ್ಯ ರಕ್ಷಣೆ ಕಾಳಜಿ ಎಷ್ಟಿದೆ ಅಂತಾ ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರವಿಂದ ಬೆಲ್ಲದ
Exit mobile version