Home ತಾಜಾ ಸುದ್ದಿ ನಾಡಹಬ್ಬಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ

ನಾಡಹಬ್ಬಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ

0
ದ್ರೌಪದಿ ಮುರ್ಮು

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ನೀಡಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಟ್ಟದ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನಾಡಹಬ್ಬ ಮೈಸೂರು ದಸರಾಕ್ಕೆ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವರು ಉಪಸ್ಥಿತರಿದ್ದರು.

Exit mobile version